
ಕನ್ನಡಿಗರ ಕ್ಷಮೆ ಕೇಳಿದ ಸೋನು ನಿಗಮ್; ಪ್ರೀತಿಗಾಗಿ ಅಹಂಕಾರ ಬದಿಗಿಟ್ಟ ಗಾಯಕ
ಕನ್ನಡ ಹಾಡು ಹೇಳುವಂತೆ ಒತ್ತಾಯಿಸಿದ್ದನ್ನು ಪಹಲ್ಗಾಮ್ ಘಟನೆಗೆ ಹೋಲಿಸಿದ್ದ ಗಾಯಕ ಸೋನು ನಿಗಮ್ ಅವರನ್ನು ಕರ್ನಾಟಕದಲ್ಲಿ ಬ್ಯಾನ್ ಮಾಡಲು ನಿರ್ಧರಿಸಲಾಗಿತ್ತು. ಅದರ ಬೆನ್ನಲ್ಲೇ ಅವರು ಕನ್ನಡಿಗರಲ್ಲಿ ಕ್ಷಮೆ ಕೇಳಿದ್ದಾರೆ. ‘ನಿಮ್ಮ ಮೇಲೆ ನನಗೆ ಇರುವ ಪ್ರೀತಿಯು ನನ್ನ ಅಹಂಕಾರಕ್ಕಿಂತ ದೊಡ್ಡದು’ ಎಂದು ಅವರು ಹೇಳಿದ್ದಾರೆ.
ಕನ್ನಡಿಗರ ಕ್ಷಮೆ ಕೇಳಿದ ಸೋನು ನಿಗಮ್; ಪ್ರೀತಿಗಾಗಿ ಅಹಂಕಾರ ಬದಿಗಿಟ್ಟ ಗಾಯಕ
ಕಡೆಗೂ ಗಾಯಕ ಸೋನು ನಿಗಮ್ (Sonu Nigam) ಅವರು ಕನ್ನಡಿಗರಲ್ಲಿ ಕ್ಷಮೆ ಕೇಳಿದ್ದಾರೆ. ಬೆಂಗಳೂರಿನಲ್ಲಿ ಸಂಗೀತ ಕಾರ್ಯಕ್ರಮ ನಡೆಸುವಾಗ ಸೋನು ನಿಗಮ್ ನೀಡಿದ್ದ ಹೇಳಿಕೆ ಸಾಕಷ್ಟು ವಿವಾದ (Sonu Nigam Controversy) ಸೃಷ್ಟಿಸಿತ್ತು. ‘ಕನ್ನಡ ಕನ್ನಡ ಎನ್ನುವುದಕ್ಕೇ ಪಹಲ್ಗಾಮ್ ಘಟನೆ ನಡೆದಿದ್ದು’ ಎಂದು ಅವರು ಹೇಳಿದ್ದರು. ಅವರ ಹೇಳಿಕೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗಿತ್ತು. ಅವರು ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಲಾಗಿತ್ತು. ಅದರಂತೆ ಅವರೀಗ ಕರುನಾಡಿನ ಜನರಲ್ಲಿ ಕ್ಷಮೆ (Sonu Nigam Apology) ಕೇಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸೋನು ನಿಗಮ್ ಪೋಸ್ಟ್ ಮಾಡಿದ್ದಾರೆ.
‘ಕ್ಷಮೆ ಇರಲಿ ಕರ್ನಾಟಕ. ನಿಮ್ಮ ಮೇಲೆ ನನಗೆ ಇರುವ ಪ್ರೀತಿ ನನ್ನ ಅಹಂಕಾರಕ್ಕಿಂತಲೂ ದೊಡ್ಡದು. ನಿಮ್ಮನ್ನು ಯಾವಾಗಲೂ ಪ್ರೀತಿಸುತ್ತೇನೆ’ ಎಂದು ಸೋನು ನಿಗಮ್ ಅವರು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಅವರು ವಿವಾದ ಅಂತ್ಯಗೊಳಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಸೋನು ನಿಗಮ್ ಮಾಡಿರುವ ಈ ಪೋಸ್ಟ್ ವೈರಲ್ ಆಗುತ್ತಿದೆ.
ಯಾವುದೇ ವಿಷಯವನ್ನು ಪ್ರಸ್ತಾಪ ಮಾಡುವಾಗ ಯಾರಿಗೆ ನೋವುಂಟು ಮಾಡಬಾರದು ಅನ್ನೊದು. ಪ್ರತಿಯೊಬ್ಬರೂ ಕಲಿಯಬೇಕು.. ಭಾಷೆ ಸಂಸ್ಕೃತಿ ಮುಂದೆ ಇವರ ego ನೆಡೆಯಲ್ಲ ಅನ್ನೋದು ಅರಿವಾಗಿದೆ…
